Admissions now open for Diploma course 2021-22

ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2021-22ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಇದ್ದು ವಿದ್ಯಾರ್ಥಿವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.

Recognised and aided by the Govt, of Karnataka, the Ninasam Theatre Institute at Heggodu calls for applications for the 10 months Diploma in Theatre Arts Course for the year 2021-22. Minimum qualification for admission is SSLC, but gradutes are prefered. Candidates must have a deep interest in theatre and some experience of working in the field. It is a completely residential course and all male and female students will get hostel and food facility on the campus, and the students also get a scholarship roughly to cover their basic living costs. The one year course offers both theoretical and practical training in the concepts of the theatre medium, history of drama and theatre, acting, stagecraft and theatre management. Apart from the trained staff in the Institute, teachers from outside are invited all through the year for conducting classes and productions. The Institute also has a good library and audio visual collection of material. The course will be rigorous, full time, and the students are expected work between 7 am and 9.30 pm every day, with breaks.